FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Wednesday, October 22, 2014

DEEPAVALI

ದೀಪಾವಳಿ ಹಬ್ಬದ ಶುಭಾಶಯಗಳು:

ದೀಪಾವಳಿ (ದೀಪಗಳ ಸಾಲು) ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು.
ಭಾರತದ ಸಾಂಪ್ರದಾಯಿಕ ಪಂಚಾಂಗಗಳು ಚಂದ್ರಮಾನವನ್ನು ಅವಲಂಬಿಸಿವೆ, ಅಂದರೆ ಆಶ್ವಯುಜ ಮಾಸ ಕೃಷ್ಣಪಕ್ಷದ ಚತುರ್ದಶಿ, ಅಮಾವಾಸ್ಯೆ ಹಾಗೂ ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ - ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತದೆ. ದೀಪಾವಳಿ ಹಬ್ಬ ಸಾಮಾನ್ಯವಾಗಿ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ. ಅಮಾವಾಸ್ಯೆಯ ದಿನ ದೀಪಾವಳಿಯ ಹಬ್ಬದ ಕಾಲದಲ್ಲೇ ಉಂಟಾಗುತ್ತದೆ. ಅಮಾವಾಸ್ಯೆಯ ನಿಖರ ದಿನಾಂಕ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆ ಬೇರೆ ದಿನಗಳಂದು ಆಗಬಹುದು - ಇದರೊಂದಿಗೆ ದೀಪಾವಳಿಯ ದಿನಾಂಕವೂ ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆಯಾಗಬಹುದು.
 
ಎರಡು ಪೌರಾಣಿಕ ಘಟನೆಗಳು ಮುಖ್ಯವಾಗಿ ದೀಪಾವಳಿಯೊಂದಿಗೆ ಸಂಬಂಧಿತವಾಗಿವೆ:
  • ಶ್ರೀ ರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ
  • ಅಮಾವಾಸ್ಯೆಯ ಹಿಂದಿನ ದಿನ (ಚತುರ್ದಶಿ) ಶ್ರೀ ಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ
ಒಟ್ಟಿನಲ್ಲಿ ದೀಪಾವಳಿಯಲ್ಲಿ ಕೇಡಿನ ಮೇಲೆ ಶುಭದ ವಿಜಯವನ್ನು ಆಚರಿಸಲಾಗುತ್ತದೆ. ದೀಪಾವಳಿಯೊಂದಿಗೆ ಇನ್ನಿತರ ಪುರಾಣಗಳೂ ಸಂಬಂಧಿತವಾಗಿದೆ. ಉದಾಹರಣೆಗೆ, ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರು ದಿನ ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತದೆ.
  • ಸಿಕ್ಖ್ ಧರ್ಮದಲ್ಲಿಯೂ ದೀಪಾವಳಿ ಮುಖ್ಯ ಹಬ್ಬ. 1620 ರಲ್ಲಿ ಸಿಕ್ಖರ ಆರನೆಯ ಗುರು ಹರಗೋಬಿಂದ್ ಸಿಂಗ್ ಗ್ವಾಲಿಯರ್‌ನ ಕೋಟೆಯಲ್ಲಿ ಬಂಧಿತರಾಗಿದ್ದ 52 ರಾಜರನ್ನು ಬಿಡಿಸಿ ತಂದ ದಿನವೆಂದು ಈ ಕಾಲವನ್ನು ಆಚರಿಸಲಾಗುತ್ತದೆ.
  • ದೀಪಾವಯು ಜೈನ ಧರ್ಮದಲ್ಲಿ ಕಡೆಯ ತೀರ್ಥಂಕರ ಮಹಾವೀರರು ಕಾರ್ತಿಕ ಚತಿರ್ದಶಿಯಂದು (ಕ್ರಿ.ಪೂ 527 ಅಕ್ಟೋಬರ್ 15) ಪಾವಾಪುರಿಯಲ್ಲಿ ಮೋಕ್ಷ ಹೊಂದಿದ ದಿನವಾಗಿ ಆಚರಿಸಲ್ಪಡುತ್ತದೆ.

 ಹಿಂದೂ ಧರ್ಮದಜನರು ಪ್ರತಿ ವರ್ಷವೂ ಪ್ರಪಂಚದ ಎಲ್ಲೆಡೆ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆಗಳು, ಸಿಹಿತಿಂಡಿಗಳು ಎಲ್ಲಕ್ಕೂ ಹೆಚ್ಚಾಗಿ ಪಟಾಕಿಗಳಿಗೆ ದೀಪಾವಳಿ ಪ್ರಸಿದ್ಧ. ಉತ್ತರ ಭಾರತದಲ್ಲಿ ದೀಪಾವಳಿಯ ಸಮಯವೇ ಹೊಸ ಆರ್ಥಿಕ ವರ್ಷದ ಪ್ರಾರಂಭ ಸಹ; ಹೊಸ ಲೆಕ್ಕದ ಪುಸ್ತಕಗಳನ್ನು ಈ ಸಮಯದಲ್ಲೇ ತೆರೆಯಲಾಗುತ್ತದೆ. ದೀಪಾವಳಿಯ ಅಂಗವಾಗಿ ನಡೆಯುವ ಇತರ ಸಮಾರಂಭಗಳಲ್ಲಿ ಆಯುಧಪೂಜೆ ಮತ್ತು ಗೋಪೂಜೆಗಳನ್ನು ಹೆಸರಿಸಬಹುದು. ಪಟಾಕಿಗಳನ್ನು ಸ್ಫೋಟಿಸುವುದು ದೀಪಾವಳಿಯ ಆಚರಣೆಯ ಒಂದು ಭಾಗವಾಗಿದೆ. . ಅನೇಕ ಕಡೆಗಳಲ್ಲಿ ದೀಪಾವಳಿಯನ್ನು ಐದು ದಿನಗಳ ಕಾಲ ಆಚರಿಸಲಾಗುತ್ತದೆ. ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು. ಜೈನ ಧರ್ಮದಲ್ಲಿ ದೀಪಾವಳಿಯನ್ನು ಕಾರ್ತಿಕ ಮಾಸದ 3 ದಿನ ಆಚರಿಸುತ್ತಾರೆ. ಮನೆಯ ದ್ವಾರವನ್ನು ದೀಪದಿಂದ ಬೆಳಗುವುದರ ಜೊತೆಗೆ ಈ ಸಮಯದಲ್ಲಿ ಮಹಾವೀರರ ಉಪದೇಶಗಳನ್ನೊಳಗೊಂಡ ಉತ್ತಾರಾಧ್ಯಾಯನ ಸ್ತೋತ್ರದ ಪಠಣೆ ಮಾಡುತ್ತಾರೆ. ಕೆಲವರು ಮಹಾವೀರರ ನಿರ್ವಾಣ ಸ್ಠಳವಾದ ಬಿಹಾರ ರಾಜ್ಯದ ಪಾವಾಪುರಿಗೆ ಯಾತ್ರೆ ಕೈಗೊಳ್ಳುತ್ತಾರೆ. ವ್ಯಾಪಾರಿಗಳು ಹೊಸ ಲೆಕ್ಕದ ಪುಸ್ತಕಗಳನ್ನು ಪ್ರಾರಂಭಿಸುತ್ತಾರೆ.
ಸಂಗ್ರಹ : ವಿಕಿಪೀಡಿಯ

No comments:

Post a Comment