FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Friday, November 7, 2014

C V RAMAN Birthday

ನವೆಂಬರ್ 7 - ಸರ್ ಸಿ.ವಿ. ರಾಮನ್ ಜನ್ಮ ದಿನ :
ಇಂದು ಭಾರತದ ಪ್ರಸಿದ್ಧ ಭೌತ ವಿಜ್ಞಾನಿ ಸರ್. ಸಿ. ವಿ. ರಾಮನ್ ಅವರ ಜನ್ಮದಿನ . 'ಚಂದ್ರಶೇಖರ ವೆಂಕಟಾರಾಮನ್', ನವೆಂಬರ್ 7, 1888 ರಲ್ಲಿ ತಮಿಳುನಾಡಿನ ತಿರುಚಿನಾಪಳ್ಳಿ 'ತಿರುವನೈಕಾವಲ್' ಎಂಬಲ್ಲಿ ಜನಿಸಿದರು. ಅವರ ತಂದೆ, ಚಂದ್ರಶೇಖರ್ ಕಾಲೇಜಿನಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದರು. ತಾಯಿಯವರ ಹೆಸರು, 'ಪಾರ್ವತಿ ಅಮ್ಮಾಳ್'. ಆದರೆ ಕುಟುಂಬ ದೊಡ್ಡದಾಗಿದ್ದರಿಂದ ಬಡತನದ ಸ್ಥಿತಿಯಲ್ಲಿದ್ದರು. ರಾಮನ್ ಗೆ ಸಾಕಷ್ಟು ಶೈಕ್ಷಣಿಕ ಸೌಕರ್ಯಗಳನ್ನು ಒದಗಿಸುವ ಅನುಕೂಲ ಅವರಿಗಿರಲಿಲ್ಲ. ಮೇಧಾವಿಯಾಗಿದ್ದ ರಾಮನ್ ವಿದ್ಯಾಭ್ಯಾಸ ಹಾಗೂ ವೃತ್ತಿಜೀವನದಲ್ಲಿ ಮಾಡಿದ ಸಾಧನೆ ಅಪಾರವಾಗಿತ್ತು.ರಾಮನ್ ಪರಿಣಾಮ ಎಂಬ ತತ್ತ್ವವು ವಿಜ್ಞಾನಕ್ಕೆ ಸರ್ ಸಿ. ವಿ. ರಾಮನ್ ರ ಒಂದು ದೊಡ್ಡ ಕೊಡುಗೆಯಾಗಿದೆ. “ಆಕಾಶದ ನೀಲಿ ಬಣ್ಣ ಅವರನ್ನು ಸ್ಥಬ್ಧರನ್ನಾಗಿ ಮಾಡಿತ್ತು'. ಅದು ಹೇಗೆ ಸಾಧ್ಯ  ? ಎಂಬ ಪ್ರಶ್ನೆ ರಾಮನ್ ರನ್ನು ಮೊದಲಿನಿಂದಲೂ ಕಾಡುತ್ತಿತ್ತು. ಅದಕ್ಕೆ ಉತ್ತರ ಕಂಡು ಹಿಡಿಯಲು ಪ್ರಯೋಗ ಮಾಡುತ್ತ ಅವರು ಬಹಳ ಸಮಯವನ್ನು ವ್ಯಯಿಸಿದರು. ಸಮುದ್ರದ ಮೇಲೆ ವಿದೇಶ ಪ್ರಯಾಣದಲ್ಲಿದ್ದಾಗ ಕಡಲಿನ ನೀಲಿ ಬಣ್ಣದ ಕಾರಣವನ್ನು ಅರಿಯಲು ಪ್ರಯೋಗ ಮಾಡುತ್ತ ಹಡಗಿನತುಂಬ ಅಲೆದಾಡುತ್ತಿದ್ದರು. ಆಕಾಶದ ನೀಲಿ ಬಣ್ಣ ರಾಮನ್ ರ ಕುತೂಹಲ ಕೆರಳಿಸಿ ಪ್ರಯೋಗಕ್ಕೆ ತೊಡಗಿಸಿತು. ಹಾಗೇ ಬಗೆಬಗೆಯ ಹೂಗಳ ಬಣ್ಣದಿಂದಲೂ ಅವರು ಆಶ್ಚರ್ಯ ಚಕಿತರಾಗುತ್ತಿದ್ದರು. ವಾತಾವರಣದಲ್ಲಿಯ ಧೂಳಿನ ಕಣಗಳು ಬೆಳಕನ್ನು ಭಾಗಶಃ ಚದುರಿಸುವವು. ಹೀಗೆ ಬೆಳಕು ಚದುರಿದಾಗ, ಅದರ ಎಲ್ಲ ಬಣ್ಣಗಳೂ ಚದುರುವುವು. ಹೆಚ್ಚು ಚದುರದ ಕೆಂಪು ಬೆಳಕು ದಿಗಂತದ ಸಮೀಪ ಸೂರ್ಯಕಾಣುವ ಪ್ರದೇಶದಲ್ಲಿ ಪ್ರಜ್ವಲಿಸುವುದು. ಉಳಿದದ್ದು ಆಕಾಶಕ್ಕೆ ನೀಲಿ ಬಣ್ಣವನ್ನು ನೀಡುವುದು. ಬೆಳಕು ಚದುರುವಾಗ ಶಕ್ತಿಯ ಸ್ವೀಕಾರ ಅಥವಾ ದಾನ ಬೆಳಕಿನ ತರಂಗಾಂತರವನ್ನು ನಿರ್ದಿಷ್ಟವಾಗಿ ಬದಲಾಯಿಸುವ ಸಾಧ್ಯತೆ ಲಕ್ಷ್ಯದಲ್ಲೊಂದು ಮಾತ್ರ. ಎಂದರೆ ಒಂದು ಲಕ್ಷ ಬೆಳಕಿನ ಕಣಗಳು ಚದುರಿದಾಗ ಒಂದು ಮಾತ್ರ ರಾಮನ್ ಪರಿಣಾಮಕ್ಕೆ ಒಳಗಾಗುವುದು, ಎನ್ನುವ ವಿಚಾರ ಬೆಳಕಿಗೆ ಬಂತು. ಇದನ್ನೇ “ರಾಮನ್ ಪರಿಣಾಮ ” ಎಂದು ಕರೆಯಲಾಗುತ್ತದೆ. 'ಡಾ.ಸರ್.ಸಿ.ವಿ.ರಾಮನ್',ಎಂದೇ ತಮ್ಮ ಆಪ್ತಗೆಳೆಯರು ಹಾಗೂ ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ,'ಚಂದ್ರಶೇಖರ ವೆಂಕಟರಾಮನ್ ರವರು, ನೋಬೆಲ್ ಪ್ರಶಸ್ತಿ ಗಳಿಸಿದ, ಪ್ರಪ್ರಥಮ ಭಾರತೀಯ ವಿಜ್ಞಾನಿ. ಈ ಪ್ರಶಸ್ತಿಯನ್ನು 1930 ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.

No comments:

Post a Comment