FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Friday, November 7, 2014

World Cancer Awarenes Day

ನವೆಂಬರ್ 7 -  ವಿಶ್ವ ಕ್ಯಾನ್ಸರ್ ಜನಜಾಗ್ರತಿ ದಿನ :

ಕ್ಯಾನ್ಸರ್ ಎನ್ನುವುದು ವಿಶ್ವದ ಮಾರಣಾಂತಿಕ ಖಾಯಿಲೆಗಳ ಪಟ್ಟಿಯಲ್ಲಿ ಎರಡನೆ ಅಗ್ರಸ್ಥಾನವನ್ನು ಅಲಂಕರಿಸಿದೆ. (ಮೊದಲನೆಯದು ಹ್ರದಯಾಘಾತ) ಕ್ಯಾನ್ಸರ್ ರೋಗವನ್ನು ಕನ್ನಡದಲ್ಲಿ ಅರ್ಬುದ ರೋಗ ಎಂದು ಕರೆಯುತ್ತಾರೆ . ವಿಶ್ವದಾದ್ಯಂತ ಕೋಟ್ಯಾಂತರ ಮಂದಿ ಕ್ಯಾನ್ಸರ್ ನಿಂದಾಗಿ  ಸಾಯುತ್ತಿದ್ದಾರೆ . ಬಾಯಿ, ಗಂಟಲು, ಶ್ವಾಸಕೋಶ, ಕರುಳಿನ ಕ್ಯಾನ್ಸರ್ ಮತ್ತು ಪ್ರೋಸ್ಪೆಟ್ ಕ್ಯಾನ್ಸರ್ ಪುರುಷರಲ್ಲಿ ಹೆಚ್ಚಾಗಿರುತ್ತದೆ . ಸ್ತನ ಕ್ಯಾನ್ಸರ್ , ಗರ್ಭಕೋಶದ ಕ್ಯಾನ್ಸರ್ ಮತ್ತು ಜನನಾಂಗದ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆ, ಧೂಮಪಾನ ಮತ್ತು ಮದ್ಯಪಾನ, ಅನುವಂಶಿಯ  ಕಾರಣಗಳು, ಆರಾಮದಾಯಕ ಜೀವನ ಶೈಲಿ , ಅನಾರೋಗ್ಯಪೂರ್ಣ ಆಹಾರ ಪದ್ಧತಿ , ಅತಿಯಾದ ಗರ್ಭನಿರೋಧಕ ಮಾತ್ರೆ ಬಳಕೆ, ವಾತಾವರಣದ ವೈಪರೀತ್ಯ, ವಾಯುಮಾಲಿನ್ಯ, ಅನಾರೋಗ್ಯಕರವಾದ ಲೈಂಗಿಕ ಜೀವನ ಮತ್ತು ಅನೈತಿಕ ಸಂಬಂಧಗಳು  ಮೊದಲಾದ ಕಾರಣಗಳಿಂದ ಕ್ಯಾನ್ಸರ್ ರೋಗ ಬರುವುದು . ಈ ರೋಗವನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿದಲ್ಲಿ ಸಂಪೂರ್ಣವಾಗಿ ಗುಣಪಡಿಸಬಹುದು . ಮುಂದುವರಿದ ದೇಶಗಳಲ್ಲಿ ಒಂದು ಮತ್ತು ಎರಡನೇ ಹಂತದಲ್ಲಿ ಗುರುತಿಸಿ ಪರಿಣಾಮಕಾರಿ ಚಿಕಿತ್ಸೆ ನೀಡುತ್ತಾರೆ. ಆದರೆ  ಭಾರತದಂತಹ ಮುಂದುವರಿಯುತ್ತಿರುವ ದೇಶಗಳಲ್ಲಿ ಜನರು ಬಡತನ ಮೂಢನಂಬಿಕೆ , ಅನಕ್ಷರತೆ ಅಜ್ಞಾನ ಮತ್ತು ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ವೈದ್ಯರ ಬಳಿ ಬರುವಾಗ ಕ್ಯಾನ್ಸರ್ ಮೂರು ಅಥವಾ ನಾಲ್ಕನೇ ಹಂತಕ್ಕೆ ತಲುಪಿರುತ್ತದೆ. ಈ ಹಂತದಲ್ಲಿ ಕ್ಯಾನ್ಸರನ್ನು ಗುಣಮುಖವಾಗಿಸುವ ಸಾಧ್ಯತೆ ಬಹಳ ಕಡಿಮೆ ಇರುತ್ತದೆ . ಈ ನಿಟ್ಟಿನಲ್ಲಿ ನವೆಂಬರ್ 7 ರಂದು ಕ್ಯಾನ್ಸರ್ ಜಾಗ್ರತಿ ದಿನ  ಎಂದು ಆಚರಿಸಿ ಜನರಲ್ಲಿ ಕ್ಯಾನ್ಸರ್ ಬಗೆಗಿನ ಮೂಢ ನಂಬಿಕೆ ಮತ್ತು ಅಜ್ಞಾನಗಳನ್ನು ತೊಡೆದು ಹಾಕಿ ಹೆಚ್ಚಿನ ತಿಳುವಳಿಕೆ ಮತ್ತು ಅರಿವು ನೀಡುವ ಕಾರ್ಯ ನಡೆಸಲಾಗುತ್ತದೆ.

No comments:

Post a Comment