FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Sunday, August 9, 2015

KAYYARA KINHANNA RAI PASSED AWAY

ಸಾಹಿತಿ ಕಯ್ಯಾರರು ವಿಧಿವಶ 
ಕನ್ನಡದ ಖ್ಯಾತ ಸಾಹಿತಿ ಕವಿ ಕಯ್ಯಾರ ಕಿನ್ಹಣ್ಣ ರೈ ಅವರು ಇಂದು (09.08.2015) ಅಪರಾಹ್ನ ನಿಧನರಾದರು. ಅವರಿಗೆ 101 ವರ್ಷ ವಯಸ್ಸಾಗಿತ್ತು. ನಾಡೋಜ ಎಂದು ಪ್ರಖ್ಯಾತರಾಗಿದ್ದ ಅವರು ಶ್ರೀಮುಖ, ಐಕ್ಯಗಾನ, ಪುನರ್ನವ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ ಮೊದಲಾದ ಕವನ ಸಂಕಲನಗಳನ್ನು ರಚಿಸಿದ್ದರು. 1915 ಜೂನ್ 8 ರಂದು ಜನಿಸಿದ ಶ್ರೀಯುತರು ಕನ್ನಡಕ್ಕಾಗಿ ಹೋರಾಟ ನಡೆಸಿದ ಮಹಾನುಭಾವರು. ಅವರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸುತ್ತಾ ಶ್ರದ್ಧಾಂಜಲಿಯನ್ನು ಅರ್ಪಿಸುತ್ತಿದ್ದೇವೆ.

No comments:

Post a Comment