FLASH NEWS

FLASH NEWS: WELCOME TO 2019 - 20 ACADEMIC YEAR

NUDIMUTHU

ಇಂದಿನ ನುಡಿಮುತ್ತು:"ಹೆಜ್ಜೆ ಹಾಕುವುದು ತಪ್ಪಿದಲ್ಲಿ ತಕ್ಷಣ ಸರಿಪಡಿಸಿಕೊಳ್ಳಬಹುದು ಆದರೆ ನಾಲಿಗೆ ತಪ್ಪಿದಲ್ಲಿ ಅದರ ಪರಿಣಾಮವನ್ನು ತಪ್ಪಿಸಿಕೊಳ್ಳಲಾಗುವುದಿಲ್ಲ. .".

Tuesday, June 14, 2016

BLOOD DONATION DAY

ಜಾಗತಿಕ ರಕ್ತದಾನ ದಿನ 
ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನವಾಗಿ ಆಚರಿಸಲಾಗುತ್ತದೆ. ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ತನ್ನ ರಕ್ತವನ್ನು ಸ್ವಯಂ ಪ್ರೇರಿತವಾಗಿ ಯಾವುದೇ ಫಲಾಪೇಕ್ಷೆಯಿಲ್ಲದೆ ಕೊಡುವುದಕ್ಕೆ ರಕ್ತದಾನ ಎನ್ನುವರು . ರಕ್ತಕ್ಕೆ  ವರ್ಷ ಇಡೀ ಬೇಡಿಕೆ ಇರುತ್ತದೆ. ಯಾಕೆಂದರೆ ಅಪಘಾತಗಳು ತುರ್ತು ಶಸ್ತ್ರ ಚಿಕಿತ್ಸೆ ಇತ್ಯಾದಿ ಸಂದರ್ಭಗಳಲ್ಲಿ ರಕ್ತದ ಅಗತ್ಯ ಇರುತ್ತದೆ . ಅಲ್ಲದೆ ಅರ್ಬುದ , ಹಿಮೋಫೀಲಿಯಾ ಮುಂತಾದ ರೋಗಿಗಳು ರಕ್ತದಾನಿಗಳನ್ನೇ ಅವಲಂಬಿಸಿರುತ್ತಾರೆ. ಒಮ್ಮೆ ದಾನಿಗಳಿಂದ ಶೇಖರಿಸಿದ ರಕ್ತ 35  ರಿಂದ 40 ದಿನಗಳ ವರೆಗೆ ಮಾತ್ರ ತನ್ನ ಶಕ್ತಿಯನ್ನು ಉಳಿಸಿಕೊಂಡಿರುತ್ತದೆ .  ಆ ಬಳಿಕ  ಉಪಯೋಗಕ್ಕೆ ಬರುವುದಿಲ್ಲ. ಆದುದರಿಂದ ಜನರು ಆಗಾಗ  ರಕ್ತದಾನ ಮಾಡಿದಲ್ಲಿ ಮಾತ್ರ ನಿರಂತರವಾಗಿ ಆವಶ್ಯಕತೆ ಇರುವವರಿಗೆ ರಕ್ತ ನೀಡಿ ಜೀವ ಉಳಿಸಲು ಸಾಧ್ಯವಾಗುತ್ತದೆ. 18 ರಿಂದ 60 ವರ್ಷದ ಒಳಗಿರುವ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು . ಗಂಡಸರು ಮೂರು ತಿಂಗಳಿಗೆ ಒಮ್ಮೆ ಮತ್ತು ಹೆಂಗಸರು ಆರು ತಿಂಗಳಿಗೆ ಒಮ್ಮೆ ರಕ್ತದಾನ ಮಾಡಬಹುದು . 
   ರಕ್ತದಾನ ಮಾಡುವುದರಿಂದ ದಾನಿಯ ರಕ್ತದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಸಿಗುತ್ತದೆ . ದೇಹದಲ್ಲಿ ಹೊಸ ರಕ್ತ ಚಾಲನೆಯಿಂದ ಕಾರ್ಯ ತತ್ಪರತೆ , ಜ್ಞಾಪಕ ಶಕ್ತಿ ವ್ರದ್ಧಿಯಾಗುತ್ತದೆ. ದೇಹದಲ್ಲಿ ಕೊಬ್ಬಿನ ಅಂಶ ಕಡಿಮೆ ಮಾಡಲು ಸಹಾಯವಾಗುತ್ತದೆ. 
ರಕ್ತದಾನ ಮಹಾದಾನ. ರಕ್ತದಾನ ಮಾಡಿ ಜೀವ ದಾನ ನೀಡಿ.
ನಮ್ಮ ಶಾಲೆಯಲ್ಲಿ ರಕ್ತದಾನ ದಿನವಾದ ಇಂದು ಶಾಲಾ ಅಸೆಂಬ್ಲಿಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿ  ಸಿಂಜಿತಾ  ರಕ್ತದಾನದ ಮಹತ್ವದ ಬಗ್ಗೆ ಭಾಷಣ ಮಾಡಿದಳು. ಮಧುರಾ ಪಿ. ರಕ್ತದ ಆರೋಗ್ಯದಲ್ಲಿ  ದ್ವಿದಳ ಧಾನ್ಯಗಳ ಪಾತ್ರ ಎಂಬ ವಿಷಯದ  ಬಗ್ಗೆ  ಸೆಮಿನಾರ್ ಮಂಡಿಸಿದಳು. ಶಾಲಾ ವಿಜ್ಞಾನ ಸಂಘ ಇದಕ್ಕೆ ನೇತ್ರತ್ವ ನೀಡಿತು. 

No comments:

Post a Comment