ವಿಶ್ವ ಮಾದಕ ವಸ್ತು ವಿರುದ್ಧ ದಿನಾಚರಣೆ
ಇಂದು ನಮ್ಮ ಶಾಲೆಯಲ್ಲಿ ವಿಶ್ವ ಮಾದಕ ವಸ್ತು ವಿರುದ್ಧ ದಿನವನ್ನು ಆಚರಿಸಲಾಯಿತು. ಬೆಳಿಗ್ಗೆ ಶಾಲಾ ಅಸೆಂಬ್ಲಿಯಲ್ಲಿ ಮಾದಕ ವಸ್ತು ಸೇವನೆಯ ವಿರುದ್ಧ ಎಲಾ ಮಕ್ಕಳೂ ಅಧ್ಯಾಪಕರೂ ಪ್ರತಿಜ್ಞೆ ಗೈದೆವು. ಬಳಿಕ ಜನ ಜಾಗ್ರತಿ ಮೂಡಿಸುವ ಸಲುವಾಗಿ ಶಾಲಾ ಪರಿಸರದಲ್ಲಿ ಮಾದಕ ವಸ್ತು ವಿರೋಧಿ ಮೆರವಣಿಗೆಯನ್ನು ಹಮ್ಮಿಕೊಂಡೆವು. ಶಾಲಾ ಮುಖ್ಯೋಪಾಧ್ಯಾಯರು ಧ್ವಜವನ್ನು ಎತ್ತುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಬಳಿಕ ಮಕ್ಕಳು ಮಾದಕ ವಸ್ತು ಸೇವನೆ ವಿರುದ್ಧದ ಘೋಷಣೆಗಳನ್ನು ಕೂಗುತ್ತಾ ಧರ್ಮತ್ತಡ್ಕ ಪೇಟೆಯಲ್ಲಿ ಮೆರವಣಿಗೆ ನಡೆಸಿದರು. ಶಾಲಾ ಸಹಾಯಕ ಅಧ್ಯಾಪಕ ಶ್ರೀ ರಾಮ ಮೋಹನ ಮಾಸ್ಟರ್ ಅವರು ಮೆರವಣಿಗೆಗೆ ನೇತ್ರತ್ವ ವಹಿಸಿದರು.
ಧರ್ಮತ್ತಡ್ಕ ಬಸ್ ನಿಲ್ದಾಣದ ಬದಿಯಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಮಕ್ಕಳು ತಾವು ತಯಾರಿಸಿದ ಸೂಚನಾ ಫಲಕಗಳನ್ನು ಹಿಡಿದು ಘೋಷಣೆ ಕೂಗಿದರು.
ತುಂತುರು ಮಳೆಯ ನಡುವೆಯೂ ಮಕ್ಕಳು ಬಹಳ ಉತ್ಸಾಹದಿಂದ ಮೆರವಣಿಗೆಯಲ್ಲಿ ಭಾಗವಹಿಸಿ ಅದನ್ನು ಯಶಸ್ವಿಗೊಳಿಸಿದರು